ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಈಗಾಗಲೇ ರೈತರ ಪರವಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆ (PM Kisan Yojana) ಕೂಡ ಒಂದಾಗಿದೆ.
ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಇದುವರೆಗೂ ನೋಂದಾವಣೆ ಮಾಡಿಕೊಂಡಿರುವಂತಹ ರೈತರಿಗೆ ಆರ್ಥಿಕ ಸಹಾಯ ಆಗಲಿ ಎನ್ನುವ ಕಾರಣಕ್ಕಾಗಿ ಒಂದು ವರ್ಷಕ್ಕೆ ಒಟ್ಟಾರೆಯಾಗಿ 6000 ರೂಪಾಯಿ ಅಂದರೆ ನಾಲ್ಕು ತಿಂಗಳಿಗೆ ಒಮ್ಮೆ ರೈತರ ಖಾತೆಗೆ ತಲಾ 2,000 ರೂಪಾಯಿ ಹಣವನ್ನು ಪಾವತಿ ಮಾಡಿಕೊಂಡು ಬರುವಂತಹ ಕೆಲಸವನ್ನು ಮಾಡಿದ್ದು, ಸದ್ಯಕ್ಕೆ ರೈತರು 18ನೇ ಕಂತಿನ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ (PM Kisan Yojana) ಹಣದ ನಿರೀಕ್ಷೆಯಲ್ಲಿ ಇದ್ದಾರೆ. ಈ ಬಗ್ಗೆ ಹೊಸ ಅಪ್ಡೇಟ್ ಬಂದಿದ್ದು ಬನ್ನಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳೋಣ.
ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣದ ಬಗ್ಗೆ ಇಲ್ಲಿದೆ ಬಿಗ್ ಅಪ್ಡೇಟ್:
ಜೂನ್ ತಿಂಗಳಲ್ಲಿ ಸರ್ಕಾರ 17ನೇ ಕಂತಿನ ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡುವ ಕೆಲಸವನ್ನು ಮಾಡಿತು. ಈ ಲೆಕ್ಕಾಚಾರದಲ್ಲಿ ಸರ್ಕಾರ ಅಕ್ಟೋಬರ್ ತಿಂಗಳಿನಲ್ಲಿ 18ನೇ ಕಂತಿನ ಹಣವನ್ನು ವರ್ಗಾಯಿಸುವುದು ಖಚಿತವಾಗಿದೆ.
ಈ ಯೋಜನೆ ಅಡಿಯಲ್ಲಿ ನೋಂದಣಿ ಮಾಡಿಕೊಂಡಿರುವ ರೈತರಿಗೆ ಮಾತ್ರ ಹಣ ವರ್ಗಾವಣೆ ಆಗಲಿದೆ ಹಾಗೂ ಆರ್ಥಿಕವಾಗಿ ಹಿಂದುಳಿದಿರುವಂತಹ ರೈತರಿಗೆ ಮಾತ್ರ ಎನ್ನುವುದನ್ನ ಇಲ್ಲಿ ಪ್ರಮುಖವಾಗಿ ತಿಳಿದುಕೊಳ್ಳಬೇಕಾಗಿದೆ.
ಇನ್ನು ನೀವು 18ನೇ ಕಂತಿನ ಹಣದ ಅಪ್ಡೇಟ್ ಬಗ್ಗೆ ತಿಳಿದುಕೊಳ್ಳುವುದಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Yojana) ಯ ಅಧಿಕೃತ ವೆಬ್ ಸೈಟ್ ಗೆ ಹೋಗಿ ಅಲ್ಲಿ ನಿಮ್ಮ ಬಗ್ಗೆ ಕೇಳಲಾಗುವಂತಹ ಮಾಹಿತಿಗಳನ್ನು ನೀಡಿ ಅಪ್ಡೇಟ್ ಗಳನ್ನ ತಿಳಿದುಕೊಳ್ಳಬಹುದಾಗಿದೆ. ಒಟ್ಟಾರೆಯಾಗಿ ಅಕ್ಟೋಬರ್ ತಿಂಗಳಿನಲ್ಲಿ ಈ ಯೋಜನೆಯ 2,000 ರೂಪಾಯಿ ಹಣ ಖಂಡಿತವಾಗಿ ರೈತರ ಖಾತೆಗೆ ಬಂದು ತಲುಪುತ್ತದೆ.